ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಕ್ಲು ಶಿವ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜ್ ಅವರನ್ನು ಪೊಲೀಸರು ಕೊನೆಗೂ ವಶಕ್ಕೆ ಪಡೆದಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದ ಹಿನ್ನೆಲೆ ಬಂಧನದ ಭೀತಿಯಿಂದ ಗುಜರಾತ್ ಅಹಮದಾಬಾದ್ನಲ್ಲಿ ತಲೆ ಮರಿಸಿಕೊಂಡಿದ್ದ ಶಾಸಕ ಬೈರತಿ ಬಸವರಾಜ್ನನ್ನು ಏರ್ಪೋರ್ಟ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಹಮದಾಬಾದ್ನಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಬೈರತಿ ಬಸವರಾಜ್ನನ್ನು ಲುಕ್ ಔಟ್ ನೋಟೀಸ್ ಹಿನ್ನಲೆ ಏರ್ಪೋರ್ಟ್ನಲ್ಲಿ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ.



