April 16, 2026
Thursday, April 16, 2026
spot_img

ಸಾಲ ತೀರಿಸಲಾಗದ ಕಾಫಿ ಎಸ್ಟೇಟ್‌ಗಳ ಹರಾಜು ತಾತ್ಕಾಲಿಕ ಸ್ಥಗಿತ: ನಿರ್ಮಲಾ ಸೀತಾರಾಮನ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಫಿ ಬೆಳೆಗಾರರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕುಗಳು ಸಾಲ ಮರುಪಾವತಿ ಆಗದ ಕಾಫಿ ತೋಟಗಳನ್ನು ಹರಾಜು ಮಾಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸರ್ಫಾಸಿ ಕಾಯ್ದೆ ಜಾರಿಯಾದ ಬಳಿಕ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಅನೇಕ ಬೆಳೆಗಾರರು ಆರ್ಥಿಕ ಒತ್ತಡಕ್ಕೆ ಒಳಗಾಗಿದ್ದರು.

ಇದನ್ನೂ ಓದಿ:

ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗವು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಮ್ಮುಖದಲ್ಲಿ ಸಚಿವೆ ಅವರನ್ನು ಭೇಟಿ ಮಾಡಿ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿತು. ಕೆಲ ಮಧ್ಯವರ್ತಿಗಳು ಬ್ಯಾಂಕರರ ಸಹಕಾರದಿಂದ ಸುಸ್ತಿದಾರರ ತೋಟಗಳನ್ನು ಕಬಳಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ರಾಜ್ಯದ ಹೆಚ್ಚಿನ ಕಾಫಿ ಬೆಳೆಗಾರರು ಸಣ್ಣ ಭೂಮಿಯನ್ನು ಹೊಂದಿದ್ದು, ಹರಾಜು ಪ್ರಕ್ರಿಯೆ ಬಗ್ಗೆ ತಿಳಿವಳಿಕೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವೆ ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !