August 15, 2026
Saturday, August 15, 2026
spot_img

ಕೆನಡಾದಲ್ಲಿ ಹ*ತ್ಯೆಗೀಡಾದ ಕನ್ನಡಿಗನ ಪಾರ್ಥಿವ ಶರೀರ ಫೆ.16ಕ್ಕೆ ಬೆಂಗಳೂರಿಗೆ: ಸಂಸದ ಡಾ.ಕೆ.ಸುಧಾಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಮೂಲದ ಚಂದನ್ ಕುಮಾರ್ ಅವರು ಕೆನಡಾ ದೇಶದ ಟೊರೊಂಟೊ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಘಟನೆ ಬಳಿಕ, ಅವರ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರಲು ನಡೆದ ಪ್ರಯತ್ನಗಳಿಗೆ ಇದೀಗ ಫಲ ಸಿಕ್ಕಿದೆ. ಫೆಬ್ರವರಿ 14ರಂದು ಟೊರಾಂಟೋದಿಂದ ಹೊರಡುವ ದೇಹ, ನವದೆಹಲಿ ಮೂಲಕ ಫೆಬ್ರವರಿ 16ರ ಬೆಳಗ್ಗೆ ಸುಮಾರು 8:30ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿಸಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದ ಡಾ.ಕೆ.ಸುಧಾಕರ್, ದುಃಖದಲ್ಲಿರುವ ಕುಟುಂಬಕ್ಕೆ ಕನಿಷ್ಠ ಅಂತಿಮ ದರ್ಶನ ಹಾಗೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸುವ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸಹಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್. ಜೈಶಂಕರ್, ವಿದೇಶಾಂಗ ಇಲಾಖೆ ಹಾಗೂ ಕೆನಡಾದ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !