April 15, 2026
Wednesday, April 15, 2026
spot_img

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್‌ಗಳಿಗೆ ತಾತ್ವಿಕ ಒಪ್ಪಿಗೆ, ಸೆಲಬ್ರೇಷನ್‌ಗೆ ಬ್ರೇಕ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ ಇಲ್ಲಿ ಸೆಲಬ್ರೇಷನ್‌ಗಳಿಗೆ ಅವಕಾಶ ಇದೆಯಾ? ಈ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.

ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಷರತ್ತುಬದ್ಧ ಅನುಮೋದನೆ ನೀಡಲು ಕರ್ನಾಟಕ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಆದರೆ ಇಲ್ಲಿ ಸಂಭ್ರಮೋತ್ಸವಗಳಿಗೆ ಅವಕಾಶ ನೀಡಬೇಕಾ ಅಥವಾ ಬೇಡವಾ ಎನ್ನುವ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ.

ಕಳೆದ ವರ್ಷ ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ ನಂತರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದರು ಮತ್ತು ಹಲವರು ಗಾಯಗೊಂಡಿದ್ದರು. ನಂತರ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳನ್ನು ಆಯೋಜಿಸಲು ಅವಕಾಶ ನಿರಾಕರಿಸಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !