February 13, 2026
Friday, February 13, 2026
spot_img

SHOCKING | ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ, ಫಿಲಂ ಚೇಂಬರ್‌ನಲ್ಲೇ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಜೋ ಸೈಮನ್‌ ನಿಧನರಾಗಿದ್ದಾರೆ. ಫಿಲಂ ಚೇಂಬರ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಿದ್ದಾಗಲೇ ಅವರಿಗೆ ಹೃದಯಾಘಾತವಾಗಿದೆ.

ತಕ್ಷಣವೇ ಅವರನ್ನು ಪಕ್ಕದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕನ್ನಡ ಚಿತ್ರರಂಗದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೈಮನ್‌ ಕೆಲಸ ಮಾಡಿದ್ದಾರೆ.

ಮೂಲತಃ ಮಂಡ್ಯದವರಾಗಿದ್ದ ಜೋ ಸೈಮನ್, ಹಲವಾರು ಸಿನಿಮಾ ನಿರ್ದೇಶನ, ನಟನೆ ಮಾಡುವ ಜೊತೆಗೆ ಸಿನಿಮಾ ಸಂಬಂಧಿ ಸಂಘ-ಸಂಸ್ಥೆಗಳಲ್ಲಿಯೂ ಸಕ್ರಿಯರಾಗಿದ್ದರು. ಕನ್ನಡ ಚಲನಚಿತ್ರ ಸಂಘದಲ್ಲಿ ಕೆಲ ಪ್ರಮುಖ ಹುದ್ದೆಗಳನ್ನು ಸಹ ಅವರು ನಿಭಾಯಿಸಿದ್ದರು.

ಇಂದು ಸಹ ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಅವರಿಗೆ ಎದೆ ನೋವು ಕಂಡು ಬಂದಿದೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕೊಂಡೊಯ್ಯಲಾಯ್ತಾದರೂ ಅವರು ಬದುಕುಳಿಯಲಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !