ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟ, ನಿರ್ದೇಶಕ ಜೋ ಸೈಮನ್ ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಅವರು, ಅಲ್ಲಿಯೇ ಕುಸಿದುಬಿದ್ದ ನಿಧರಾಗಿದ್ದಾರೆ.
ನಿಧನದ ಸುದ್ದಿ ಕೇಳಿ ಇಡೀ ಸ್ಯಾಂಡಲ್‌ವುಡ್ ಕಂಬನಿ ಮಿಡಿದಿದೆ. ವಿಷ್ಣುವರ್ಧನ್ ಅಭಿನಯದ ಸಾಹಸಸಿಂಹ ಚಿತ್ರದ ನಿರ್ದೇಶಕರಾಗಿದ್ದ ಜೊ ಸೈಮನ್ ಸಿಂಹದ ಜೋಡಿ, ನನ್ನ ರೋಷ ನೂರು ವರುಷ, ಮಹಾ ಪ್ರಚಂಡರು, ಸಾಹಸಸಿಂಹ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದರು. ಈ ಸಿನಿಮಾಗಳ ಮೂಲಕ ಸೈಮನ್ ಮನೆಮಾತಾಗಿದ್ದು, ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ.
1977 ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದ ಜೋ ಸೈಮನ್ ಮೊದಲು ನಿರ್ದೇಶಿಸಿದ್ದು ಒಂದು ಪ್ರೇಮದ ಕತೆ, ಕನ್ನಡಕ್ಕೆ ಹಲವಾರು ಆಕ್ಷನ್ ಮತ್ತು ಪ್ರೇಮಕತಾ ಸಿನಿಮಾಗಳನ್ನು ಜೋ ಸೈಮನ್ ನೀಡಿದ್ದಾರೆ. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರೊಟ್ಟಿಗೆ ಆಪ್ತ ಗೆಳೆತನ ಹೊಂದಿದ್ದ ಜೋ ಸೈಮನ್, ಸಿಂಹ ಜೋಡಿ, ಸಾಹಸ ಸಿಂಹ, ಹಾಂಕಾಂಗ್ನಲ್ಲಿ ಏಜೆಂಟ್ ಅಮರ್, ಸ್ನೇಹದ ಕಡಲಲ್ಲಿ, ರವಿವರ್ಮ, ಟೈಂ ಬಾಂಬ್ ಇನ್ನೂ ಹಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.
ಕರ್ನಾಟಕ ಚಾಲನಚಿತ್ರ ಅಕಾಡೆಮಿ ಜೊ ಸೈಮನ್ ಅವರ ಜೀವಿತಾವಧಿ ಸಾಧನೆ ಗುರುತಿಸಿ 2013 ರಲ್ಲಿ ರಲ್ಲಿ ಬಿ.ಆರ್.ಪಂತುಲು ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.



