February 13, 2026
Friday, February 13, 2026
spot_img

IPL- 2026 | ರಾಜಸ್ಥಾನ ರಾಯಲ್ಸ್ ತಂಡಕ್ಕೆ ಹೊಸ ಸಾರಥಿಯ ನೇಮಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಹೊಸ ನಾಯಕನನ್ನು ಕಣಕ್ಕಿಳಿಸಲಿದ್ದು, ಅಚ್ಚರಿಯ ರೀತಿಯಲ್ಲಿ ರಿಯಾನ್ ಪರಾಗ್ ಅವರಿಗೆ ರಾಯಲ್ಸ್ ಫ್ರಾಂಚೈಸಿಯು ನಾಯಕತ್ವ ಪಟ್ಟ ಕಟ್ಟಿದೆ.

ಕೇರಳ ಮೂಲದ ಸಂಜು ಸ್ಯಾಮ್ಸನ್, ನಾಯಕನಾಗಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಆದರೆ ಮುಂಬರುವ ಐಪಿಎಲ್ ಟೂರ್ನಿಗೂ ಮುನ್ನ ಸಂಜು ಸ್ಯಾಮ್ಸನ್, ಚೆನ್ನೈ ಸೂಪರ್ ಕಿಂಗ್ಸ್ ತೆಕ್ಕೆಗೆ ಜಾರಿದ್ದರು. ಹೀಗಾಗಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಹೊಸ ನಾಯಕನ ಹುಡುಕಾಟದಲ್ಲಿತ್ತು. ಇದೀಗ ರಿಯಾನ್ ಪರಾಗ್ ಈ ಅದೃಷ್ಟ ಒಲಿದಿದೆ.

ರಿಯಾನ್ ಪರಾಗ್ 2019ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕಳೆದ ಏಳು ಸೀಸನ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ.
ಇದುವರೆಗೂ ಐಪಿಎಲ್‌ನಲ್ಲಿ 84 ಪಂದ್ಯಗಳನ್ನಾಡಿರುವ ರಿಯಾನ್ ಪರಾಗ್, 141.84ರ ಸರಾಸರಿಯಲ್ಲಿ 1566 ರನ್ ಸಿಡಿಸಿದ್ದಾರೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಿಯಾನ್ ಪರಾಗ್, ರಾಜಸ್ಥಾನ ರಾಯಲ್ಸ್ ತಂಡವನ್ನು ಯಾವ ರೀತಿ ಮುನ್ನಡೆಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !