ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟಕ ಇರುವುದಾಗಿ ಬೆದರಿಕೆ ಪತ್ರ ಪತ್ತೆಯಾಗಿದ್ದು ಕೆಲಕಾಲ ಗೊಂದಲ ಉಂಟಾಯಿತು. ಶಿಲ್ಲಾಂಗ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಈ ಸಂದೇಶ ಕಂಡುಬಂದಿದೆ.
ಸಂದೇಶ ಗಮನಿಸಿದ ಕೂಡಲೇ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ, ವಿಮಾನವನ್ನು ಪ್ರತ್ಯೇಕ ತಪಾಸಣಾ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು. ಭದ್ರತಾ ಸಿಬ್ಬಂದಿ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ಇದರಿಂದ ಪ್ರಯಾಣಿಕರಲ್ಲಿ ಉಂಟಾದ ಆತಂಕದ ಬಳಿಕ ಶಮನಗೊಂಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬೆದರಿಕೆ ಹುಸಿಯಾಗಿರುವ ಸಾಧ್ಯತೆಯನ್ನು ಪರಿಶೀಲಿಸುತ್ತಿದ್ದು, ಪತ್ರ ಬರೆದವರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.



