February 14, 2026
Saturday, February 14, 2026
spot_img

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 3 ಕೋಬ್ರಾ ಸಿಬ್ಬಂದಿ ಸೇರಿ 4 ಜನರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯ್‌ಪುರ ಸಮೀಪದ ಧಮ್ತಾರಿ ಜಿಲ್ಲೆಯ ಖಾಪ್ರಿ ಬೈಪಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 3 ಕೋಬ್ರಾ ಪಡೆಯ ಸಿಬ್ಬಂದಿ ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾರೆ. ಜಗದಲ್ಪುರದಿಂದ ರಾಯ್‌ಪುರದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾರುತಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು 5 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ರಾಯ್‌ಪುರಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ:

ಮೃತರನ್ನು ಸಬ್ ಇನ್‌ಸ್ಪೆಕ್ಟರ್ ಉಮೇದ್ ಸಿಂಗ್, ಹೆಡ್ ಕಾನ್‌ಸ್ಟೆಬಲ್ ಮುಖೇಶ್ ಕುಮಾರ್, ಕಾನ್‌ಸ್ಟೆಬಲ್ ರಾಜ್‌ಕುಮಾರ್ ಮತ್ತು ಚಾಲಕ ಹಿರಾಲಾಲ್ ನಗರ ಎಂದು ಗುರುತಿಸಲಾಗಿದೆ. ರಜೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !