ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿರುವ ಭ್ರಷ್ಟ ಮತ್ತು ಜನವಿರೋಧಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ ತಮ್ಮ ಪ್ರಮುಖ ಗುರಿ ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಕುರಿತು ಚರ್ಚೆ ಮಾಡುವುದಕ್ಕಿಂತ ಜನಪರ ಆಡಳಿತ ಬರಬೇಕು ಎನ್ನುವುದು ಮುಖ್ಯ ಎಂದು ಅವರು ಹೇಳಿದರು.
ಮೈತ್ರಿ ವಿಚಾರವಾಗಿ 113 ಸ್ಥಾನ ಪಡೆದು ಅವರು ಮುಖ್ಯಮಂತ್ರಿ ಆಗಬಹುದು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈಗಿನಿಂದಲೇ ಆ ವಿಚಾರದಲ್ಲಿ ಮಾತನಾಡುವ ಅಗತ್ಯವಿಲ್ಲ, ಇನ್ನೂ 2 ವರ್ಷ ಸಮಯ ಇದೆ ಎಂದು ತಿಳಿಸಿದರು. ರಾಜ್ಯದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಸರ್ಕಾರ ಬರಬೇಕು ಎಂಬುದು ತಮ್ಮ ಉದ್ದೇಶ ಎಂದು ಹೇಳಿದರು.
ಇದನ್ನೂ ಓದಿ:
ಸ್ಥಳೀಯ ಸಂಸ್ಥೆ ಹಾಗೂ ಜಿಬಿಎ ಚುನಾವಣೆ ಕುರಿತು ಇನ್ನೂ ಯಾವುದೇ ಅಂತಿಮ ಚರ್ಚೆ ನಡೆದಿಲ್ಲ. ಸಮಯ ಬಂದಾಗ ಪಕ್ಷದೊಳಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು. ಮೈತ್ರಿ ವಿಷಯದಲ್ಲಿ ನಾವು ಮುಕ್ತವಾಗಿದ್ದೇವೆ, ಜನರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬುದು ನಮ್ಮ ನಿಲುವು ಎಂದರು.
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ಬಗ್ಗೆ ವ್ಯಂಗ್ಯವಾಡಿದ ಅವರು, ಅಧ್ಯಯನಕ್ಕೆ ಹೋಗುವುದಾದರೆ ಹೋಗಲಿ, ಆದರೆ ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದು ಮುಖ್ಯ ಎಂದು ಹೇಳಿದರು.



