April 10, 2026
Friday, April 10, 2026
spot_img

ಮುಂಬೈನಲ್ಲಿ ಮೆಟ್ರೋ ಸ್ಲ್ಯಾಬ್ ಕುಸಿತಕ್ಕೆ ಓರ್ವ ಸಾವು, ನಾಲ್ವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್’ನ ಕಾಂಕ್ರೀಟ್ ಸ್ಲ್ಯಾಬ್ ವೊಂದು ಆಟೋ ಹಾಗೂ ಕಾರಿನ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಎಲ್‌ಬಿಎಸ್ ರಸ್ತೆಯ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಮಧ್ಯಾಹ್ನ ದುರ್ಘಟನೆ ಸಂಭವಿಸಿದ್ದು, ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಹಾಗೂ ಕಾರಿನ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ತಂಡ, ಮೆಟ್ರೋ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು ಮತ್ತು 108 ಆಂಬ್ಯುಲೆನ್ಸ್ ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !