February 14, 2026
Saturday, February 14, 2026
spot_img

ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ ‘ಕುಮಾರ್ ಭಾಸ್ಕರ್ ವರ್ಮಾ’ ಸೇತು ಉದ್ಘಾಟಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಲಾಗಿರುವ 6 ಪಥಗಳ ಎಕ್ಸ್‌ಟ್ರಾಡೋಸ್ಡ್ ಪ್ರಿಸ್ಟ್ರೆಸ್ಡ್ ಕಾಂಕ್ರೀಟ್ (ಪಿಎಸ್‌ಸಿ) ಸೇತುವೆಯಾದ ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಉದ್ಘಾಟಿಸಿದರು.

ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆಯು ಈಶಾನ್ಯ ಭಾರತದಲ್ಲಿ ಮೊದಲ ಎಕ್ಸ್‌ಟ್ರಾಡೋಸ್ಡ್ ರಚನೆಯಾಗಿದೆ. ಗುವಾಹಟಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಒಂದು ಪ್ರಮುಖ ಮೂಲಸೌಕರ್ಯ ಯೋಜನೆಯಾಗಿದೆ. ಈ ರಸ್ತೆಯಿಂದಾಗಿ ಸಂಪರ್ಕ, ಸೌಕರ್ಯ ಮತ್ತು ವಾಣಿಜ್ಯವು ಗಮನಾರ್ಹವಾಗಿ ವೃದ್ಧಿಯಾಗಲಿದೆ. ಜೊತೆಗೆ ಭಕ್ತರಿಗೆ ಕಾಮಾಕ್ಯ ದೇವಾಲಯಕ್ಕೆ ಸುಲಭವಾಗಿ ಹೋಗಲು ಅನುವು ಮಾಡಿಕೊಡುತ್ತದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !