February 14, 2026
Saturday, February 14, 2026
spot_img

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಖಾಕಿ ದಾಳಿ: ಐವರು ಯುವತಿಯರ ರಕ್ಷಣೆ, ಇಬ್ಬರ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದ ಶಿವನಗರದಲ್ಲಿ ಸ್ಪಾ ಹೆಸರಿನಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳ ಮೇಲೆ ದಾಳಿ ನಡೆಸಿರುವ ಬೀದರ್ ಪೊಲೀಸರು, ದೊಡ್ಡ ಮಟ್ಟದ ವೇಶ್ಯಾವಾಟಿಕೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಸಾಜ್ ಸೆಂಟರ್ ಹೆಸರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಈ ಅಡ್ಡೆಯಲ್ಲಿ ಸಿಲುಕಿದ್ದ ಮಹಾರಾಷ್ಟ್ರ, ಅಸ್ಸಾಂ, ಹರಿಯಾಣ ಹಾಗೂ ಮಧ್ಯಪ್ರದೇಶ ಮೂಲದ ಐವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ವೇಶ್ಯಾವಾಟಿಕೆ ದಂಧೆಯ ನೇತೃತ್ವ ವಹಿಸಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೀದರ್ ಎಸ್ಪಿ ಪ್ರದೀಪ್ ಗುಂಟಿ ಅವರ ನೇರ ಮಾರ್ಗದರ್ಶನದಲ್ಲಿ, ನೂತನ ಠಾಣೆಯ ಪೊಲೀಸರು ಹಾಗೂ ವಿಶೇಷ ತಂಡ ಈ ಜಂಟಿ ಕಾರ್ಯಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಿದೆ.

ಬಹಳ ದಿನಗಳಿಂದ ಸ್ಪಾ ಹೆಸರಿನಲ್ಲಿ ಗುಟ್ಟಾಗಿ ಈ ವ್ಯವಹಾರ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಅದರ ಬೆನ್ನತ್ತಿದ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಈ ಹೈಟೆಕ್ ಅಡ್ಡೆಯನ್ನು ಬಯಲಿಗೆಳೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !