ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ವಿಶೇಷವಾಗಿ ಕರಾವಳಿ ಭಾಗಗಳಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಅನುಭವವಾಗುತ್ತಿದ್ದು, ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಭಾಗಗಳಲ್ಲಿಯೂ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡುಬಂದಿದೆ.
ಬೆಂಗಳೂರು ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿರುವುದು ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತೀವ್ರತೆಯನ್ನು ಸ್ಪಷ್ಟಪಡಿಸಿದೆ.



