February 15, 2026
Sunday, February 15, 2026
spot_img

ನೆಲಮಂಗಲದ ಬಳಿ ಭೀಕರ ಅಪಘಾತ | ಬಸ್‌ಗೆ ಕಾರು ಡಿಕ್ಕಿ: 5 ಯುವಕರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸಮೀಪದ ನೆಲಮಂಗಲ ನವಯುಗ ಟೋಲ್ ಬಳಿಯ ಫ್ಲೈಓವರ್ ಬಳಿ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 5 ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ತುಮಕೂರು ರಸ್ತೆಯಿಂದ ನಗರ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

12 ಗಂಟೆ ಸುಮಾರಿಗೆ ಸಂಭವಿಸಿದ ಈ ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದ ಯುವಕರು ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಬಸ್ ಮುಂಭಾಗದ ಗಾಜು ಪುಡಿಯಾಗಿ, ಚಾಲಕ ಮತ್ತು ಕಂಡೆಕ್ಟರ್ ಸೇರಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿದ್ದ 42 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಮೃತರು ದೊಡ್ಡಬಳ್ಳಾಪುರ ಮೂಲದವರು ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಜಿಂದಾಲ್ ಆಸ್ಪತ್ರೆ ಸಮೀಪ ನಿಯಂತ್ರಣ ತಪ್ಪಿದ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು. ಪ್ರಕರಣ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !