ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿದ್ದು, ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆ.17 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಢಾಕಾದ ಸಂಸತ್ ಭವನದ ಸೌತ್ ಪ್ಲಾಜಾದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ದಕ್ಷಿಣ ಏಷ್ಯಾದ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೂಡ ಅಧಿಕೃತ ಆಹ್ವಾನ ಕಳುಹಿಸಲಾಗಿದೆ.
2024ರ ರಾಜಕೀಯ ಅಶಾಂತಿಯ ನಂತರ ನಡೆದ ಈ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಅದರ ಬೆನ್ನಲ್ಲೇ ಹೊಸ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅಧಿಕಾರ ಸ್ವೀಕರಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರಿಂದ ಅವರಿಗೆ ಪ್ರಮಾಣ ವಚನ ಬೋಧಿಸಲಾಗುವುದು ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಹಿಂದಿನ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತ ಪತನದ ಬಳಿಕ ನಡೆದ ಈ ಮೊದಲ ಚುನಾವಣೆಯಲ್ಲಿ ಆವಾಮಿ ಲೀಗ್ ಪಕ್ಷಕ್ಕೆ ಸ್ಪರ್ಧಿಸಲು ಅವಕಾಶ ಇರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಈ ಜಯದ ನಂತರ ಮೋದಿ ಅವರು ಶುಭಾಶಯ ತಿಳಿಸಿ, ಬಾಂಗ್ಲಾದ ಅಭಿವೃದ್ಧಿಗೆ ಭಾರತ ಸದಾ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.



