ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರುದಲ್ಲಿ ಮಾತನಾಡಿದ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂನ್ನು ರಾಷ್ಟ್ರಗೀತೆಯಾಗಿ ಪ್ರಚಾರ ಮಾಡುವ ಪ್ರಯತ್ನ ಸರಿಯಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ವಿವಿಧ ಧರ್ಮದ ಜನರು ಇರುವ ಹಿನ್ನೆಲೆಯಲ್ಲಿ ವಂದೇ ಮಾತರಂ ಎಲ್ಲರಿಗೂ ಸಮಾನವಾಗಿ ಸ್ವೀಕಾರಾರ್ಹವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಇದನ್ನೂ ಓದಿ:
ಕೇಂದ್ರ ಸರ್ಕಾರ ರಾಷ್ಟ್ರಗೀತೆಯ ಗೌರವವನ್ನು ಕುಗ್ಗಿಸುವ ಉದ್ದೇಶದಿಂದ ವಂದೇ ಮಾತರಂಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದು ಆರೋಪಿಸಿದ ಅವರು, ಮೊದಲು ವಂದೇ ಮಾತರಂ ಹಾಡಿ ನಂತರ ರಾಷ್ಟ್ರಗೀತೆ ಹಾಡುವುದು ಸಂಪ್ರದಾಯಕ್ಕೆ ವಿರುದ್ಧ ಎಂದರು.
ಕೋಮು ರಾಜಕೀಯವನ್ನು ಉದ್ದೀಪನಗೊಳಿಸಲು ವಂದೇ ಮಾತರಂ ವಿಚಾರವನ್ನು ಬಳಸಲಾಗುತ್ತಿದೆ ಎಂದು ಅವರು ಕಿಡಿಕಾರಿದರು. ರಾಜಕೀಯ ಲಾಭಕ್ಕಾಗಿ ಸಾಂಸ್ಕೃತಿಕ ವಿಷಯಗಳನ್ನು ಮುಂದಿಟ್ಟುಕೊಳ್ಳುವುದು ಸೂಕ್ತವಲ್ಲ ಎಂದು ಹೇಳಿದ ಅವರು, ರಾಷ್ಟ್ರಗೀತೆಯ ಗೌರವ ಕಾಪಾಡುವುದು ಎಲ್ಲರ ಕರ್ತವ್ಯ ಎಂದು ತಿಳಿಸಿದರು.



