February 16, 2026
Monday, February 16, 2026
spot_img

ದೊಡ್ಡವರ ಆಟದಲ್ಲಿ ‘ಬಾಲ’ಕ್ಕೆ ಕೆಲಸವಿಲ್ಲ: ಹೈಕಮಾಂಡ್ ಪರಮಾಧಿಕಾರ ಎತ್ತಿಹಿಡಿದ ಮಹದೇವಪ್ಪ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಸಚಿವ ಎಚ್.ಸಿ. ಮಹದೇವಪ್ಪ ಅವರು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ.

“ನಾಯಕತ್ವ ಬದಲಾವಣೆ ಚರ್ಚೆ ಎಲ್ಲಿದೆ?” ಎಂದು ಪ್ರಶ್ನಿಸಿದ ಅವರು, ಹೈಕೋರ್ಟ್‌ನ ಬೀದಿನಾಯಿಗಳ ನಿಯಂತ್ರಣದ ಆದೇಶವನ್ನು ಉಲ್ಲೇಖಿಸಿ ರಾಜಕೀಯ ಪರಿಸ್ಥಿತಿಗೆ ಹೋಲಿಕೆ ಮಾಡಿದರು.

“ಹೈಕೋರ್ಟ್ ಬೀದಿನಾಯಿಗಳನ್ನೆಲ್ಲ ಹಿಡಿದು ಒಳಗೆ ಹಾಕಿ ಎಂದು ಹೇಳುತ್ತಿದೆ. ಇಲ್ಲಿ ರಾಜ್ಯ ನಾಯಕತ್ವ ಗಟ್ಟಿಯಾಗಿದೆ,” ಎನ್ನುವ ಮೂಲಕ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಯಾವುದೇ ಧಕ್ಕೆಯಿಲ್ಲ ಎಂಬ ಸಂದೇಶ ರವಾನಿಸಿದರು. ಮಾಧ್ಯಮಗಳು ಈ ಹೋಲಿಕೆಯ ಬಗ್ಗೆ ಪ್ರಶ್ನಿಸಿದಾಗ, “ನಾನು ಹೈಕೋರ್ಟ್ ಹೇಳಿದ್ದನ್ನು ಪ್ರಸ್ತಾಪಿಸಿದೆ ಅಷ್ಟೇ. ಹೈಕಮಾಂಡ್‌ಗೆ ನಿರ್ದೇಶನ ನೀಡಲು ಯಾರಿಗೂ ಸಾಧ್ಯವಿಲ್ಲ. ಬಾಲವೇ ನಾಯಿಯನ್ನು ಅಲ್ಲಾಡಿಸುವ ಸ್ಥಿತಿ ಇಲ್ಲಿಲ್ಲ,” ಎಂದು ಮಾರ್ಮಿಕವಾಗಿ ಉತ್ತರಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !