July 12, 2026
Sunday, July 12, 2026
spot_img

ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಸ್ಥಾನಕ್ಕೆ ರೆಹಮಾನ್ ಯೂನಸ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥರಾಗಿದ್ದ ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಫೆಬ್ರವರಿ 12ರಂದು ನಡೆದ 13ನೇ ಸಂಸದೀಯ ಚುನಾವಣೆಯ ನಂತರ, ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಫೆ.17 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ರಾಷ್ಟ್ರಕ್ಕೆ ನೀಡಿದ ವಿದಾಯ ಮಾತಿನಲ್ಲಿ ಯೂನಸ್, ಇಂದು ಮಧ್ಯಂತರ ಸರ್ಕಾರವು ಕೆಳಗಿಳಿಯುತ್ತಿದೆ. ಆದರೆ ಪ್ರಾರಂಭವಾದ ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ಅಭ್ಯಾಸವನ್ನು ನಿಲ್ಲಿಸಬಾರದು ಎಂದು ಹೇಳಿದರು.

ಜೊತೆಗೆ ಹೊಸದಾಗಿ ಚುನಾಯಿತವಾದ ಸರ್ಕಾರಕ್ಕೆ ದೇಶದ ಪ್ರಜಾಪ್ರಭುತ್ವ ಸ್ವಾತಂತ್ರ್ಯಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !