February 17, 2026
Tuesday, February 17, 2026
spot_img

ಓಪನ್‌ ಆಗಿ ಮಾಂಸ ಮಾರಾಟ ಮಾಡೋದನ್ನು ನಿಷೇಧಿಸಲಿದ್ಯಾ ಬಿಹಾರ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ವರ್ಷ ಉತ್ತರ ಪ್ರದೇಶ ಸರ್ಕಾರವು ಧಾರ್ಮಿಕ ಸ್ಥಳಗಳ ಸುತ್ತ 500 ಮೀಟರ್ ಒಳಗೆ ಮಾಂಸ ಮಾರಾಟವನ್ನು ನಿಷೇಧಿಸಿದೆ. ಅದೇ ರೀತಿ ಓಪನ್ ಆಗಿ ಮಾಂಸ ಮಾರಾಟವನ್ನು ಮತ್ತಷ್ಟು ನಿರ್ಬಂಧಿಸಲು ಮುಂದಾಗಿದೆ.

ರಾಜ್ಯಾದ್ಯಂತ ಪರವಾನಗಿ ಪಡೆದ ಮಾರಾಟಗಾರರಿಗೆ ಮಾತ್ರ ಮಾಂಸ ಮಾರಾಟ ಮಾಡಲು ಅವಕಾಶ ಇದೆ. ಆದರೆ ಓಪನ್‌ ಆಗಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ಮಾಂಸ ಮಾರಾಟಕ್ಕೆ ಸಂಬಂಧಿಸಿದಂತೆ ಸರ್ಕಾರವು ಹೊಸ ನಿಯಮಗಳನ್ನು ರೂಪಿಸುತ್ತಿದೆ ಮತ್ತು ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಪರಿಸ್ಥಿತಿಯಲ್ಲಿಯೂ ಓಪನ್ ಆಗಿ ಮಾಂಸ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ. ಸರಿಯಾದ ಪರವಾನಗಿ ಹೊಂದಿರುವವರಿಗೆ ಮಾತ್ರ ಮಾಂಸ ಮಾರಾಟ ಮಾಡಲು ಅವಕಾಶ ನೀಡಲಾಗುವುದು. ಈ ನಿಯಮದ ಉಲ್ಲಂಘನೆ ಮಾಡುವಂತಿಲ್ಲ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !