September 28, 2026
Monday, September 28, 2026
spot_img

ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ: ರಸ್ತೆ ದಾಟುವ ವೇಳೆ ಬೈಕ್‌ ಡಿಕ್ಕಿಯಾಗಿ ಯುವತಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: :

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಬೈಕ್‌ ಡಿಕ್ಕಿಯಾದ ಪರಿಣಾಮ ಯುವತಿ ಮೃತಪಟ್ಟಿರುವ ಘಟನೆ ನಗರದ ರಾಜ್‌ಕುಮಾರ್ ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಬಳಿ ನಡೆದಿದೆ.

ಯೋಗೇಶ್ವರಿ (27) ಮೃತ ಯುವತಿ. ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿಯಾಗಿದ್ದ ಯೋಗೇಶ್ವರಿ, ಮಂಗಳವಾರ ಮಧ್ಯಾಹ್ನ ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಸಂದರ್ಭ ವೇಗವಾಗಿ ಬಂದ ಬೈಕ್ ಸವಾರ ಯೋಗೇಶ್ವರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದ ಯೋಗೇಶ್ವರಿ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೈಕ್ ಸವಾರನ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Must Read