ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳದ ಪ್ರಕರಣದ ಕುರಿತಾಗಿ ತನಿಖೆ ನಡೆಸುತ್ತಿರುವ ಎಸ್ ಐಟಿ ಅಂತಿಮ ವರದಿ ಸಲ್ಲಿಸಿಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಕುರಿತಾಗಿ ಎಸ್‌ಐಟಿ ಮಧ್ಯಂತರ ವರದಿ ಮಾತ್ರ ಸಲ್ಲಿಕೆಯಾಗಿದೆ, ಇನ್ನೂ ಅಂತಿಮ ವರದಿಯನ್ನು ಎಸ್‌ಐಟಿ ನೀಡಿಲ್ಲ. ಅದರ ವರದಿಯನ್ನು ಸರಕಾರಕ್ಕೆ ಸಲ್ಲಿಸುವ ಕೆಲಸ ಆಗಿಲ್ಲ ಎಂದು ತಿಳಿಸಿದರು.
ಎಸ್‌ಐಟಿ ಅಧಿಕಾರಿಗಳು ನೀಡಿದ್ದ ಮಧ್ಯಂತರ ವರದಿಯಲ್ಲಿ ಏನಿದೆ ಎಂದು ಸದನದಲ್ಲಿ ಹಾಗೂ ಬೇರೆಡೆಗಳಲ್ಲಿ ತಿಳಿಸಿದ್ದೇನೆ. ಅಂತಿಮ ವರದಿ ಬಂದ ಬಳಿಕ ಅದನ್ನು ಸರಕಾರ, ಕ್ಯಾಬಿನೆಟ್ ಮುಂದಿರಿಸಿ ಬಹಿರಂಗಗೊಳಿಸುವ ಕೆಲಸ ಮಾಡಲಿದ್ದೇವೆ. ಎಸ್ ಐಟಿ ಅದನ್ನು ಕೊಡುವವರೆಗೆ ನಾವು ಯಾವುದೇ ತೀರ್ಮಾನಕ್ಕೂ ಬರಲು ಸಾಧ್ಯವಿಲ್ಲ ಎಂದಿದ್ದಾರೆ.



