ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ತಂಡ ಕೆನಡಾ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದ್ದು, ಈ ಮೂಲಕ ಟೂರ್ನಿಯ ಸೂಪರ್-8ಕ್ಕೆ ಪ್ರವೇಶ ಪಡೆದಿದೆ.
ಮಂಗಳವಾರಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ 174 ರನ್‌ಗಳ ಗುರಿಯನ್ನು ಹಿಂಬಾಲಿಸಿದ ನ್ಯೂಜಿಲೆಂಡ್ ತಂಡ, ರಚಿನ್ ರವೀಂದ್ರ (59 ರನ್) ಹಾಗೂ ಗ್ಲೆನ್ ಫಿಲಿಪ್ಸ್ (76 ರನ್) ಅರ್ಧಶತಕಗಳ ಬಲದಿಂದ 15.1 ಓವರ್‌ಗಳಿಗೆ ಎರಡು ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ಗೆಲುವು ಪಡೆಯಿತು.
ವೆಸ್ಟ್ ಇಂಡೀಸ್, ಭಾರತ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ಇಂಗ್ಲೆಂಡ್ ಜೊತೆಗೆ ನ್ಯೂಜಿಲೆಂಡ್ ಅರ್ಹತೆ ಪಡೆದಿದೆ. ಆಡಿದ ಮೂರೂ ಪಂದ್ಯಗಳನ್ನು ಸೋತ ಕೆನಡಾ, ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಎಲಿಮಿನೇಟ್ ಆಯಿತು.



