February 17, 2026
Tuesday, February 17, 2026
spot_img

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಕನಿಷ್ಠ ಮಟ್ಟಕ್ಕೆ ಇಳಿಕೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279 ರೂ. ಕನಿಷ್ಠ ಮಟ್ಟಕ್ಕೆ ಇಳಿದಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದರು.

ಮುಂಬೈಯಲ್ಲಿ ಆಯೋಜಿಸಿದ್ದ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279ರೂ. ಕನಿಷ್ಠ ಮಟ್ಟಕ್ಕೆ ಇಳಿದಿದೆ. ಅದೇ ರೀತಿ ಸೂರ್ಯಘರ್ ಯೋಜನೆಯಡಿ ಭಾರತ ಪ್ರಸ್ತುತ 30 ಲಕ್ಷ ಮನೆಗಳಿಗೆ ಸೌರ ವಿದ್ಯುತ್ ಕಲ್ಪಿಸುವ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ ಎಂದರು.

ಪಿಎಂ ಸೂರ್ಯಘರ್’ ಮತ್ತುಪಿಎಂ ಕುಸುಮ್’ ನಮ್ಮ ಸೌರ ಶಕ್ತಿಯ ಡಬಲ್ ಇಂಜಿನ್ ಆಗಿವೆ. PM ಕುಸುಮ್ ಮತ್ತು PM ಸೂರ್ಯಘರ್ ಅಳವಡಿಕೆ ಮೂಲಕ, ರೈತರು ಮತ್ತು ಸಾಮಾನ್ಯ ಕುಟುಂಬಗಳು ಸಹ ದೇಶದ ಶುದ್ಧ ಇಂಧನ ಪರಿವರ್ತನೆ ಪ್ರಯಾಣದಲ್ಲಿ ಸಕ್ರಿಯರಾಗುತ್ತಿದ್ದಾರೆ ಎಂದರು.

ಭಾರತ ಈ ಹಿಂದೆ ಹವಾಮಾನ ಸಪ್ತಾಹ, ಹವಾಮಾನ ಸಮಾವೇಶ ಅಥವಾ ಸುಸ್ಥಿರ ಸಮಾವೇಶದಂತಹ ಕಾರ್ಯಕ್ರಮ ಆಯೋಜಿಸಿರಲಿಲ್ಲ. ಆದರೀಗ ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಹವಾಮಾನ ಸುಸ್ಥಿರತೆಯಲ್ಲಿ ದೇಶದಲ್ಲೀಗ ಮಹತ್ತರ ಬದಲಾವಣೆ ಆಗುತ್ತಿದೆ. ಪ್ರಧಾನಿಮೋದಿ ಅವರ ದೂರದೃಷ್ಟಿ, ನಾಯಕತ್ವದಲ್ಲಿ ಭಾರತ ಜಾಗತಿಕ ಹವಾಮಾನ ಸುಸ್ಥಿರತೆಯಲ್ಲಿ ನಿರ್ಣಾಯಕ ಹೆಜ್ಜೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !