April 8, 2026
Wednesday, April 8, 2026
spot_img

ಪ್ರೀತಿ ಹೆಸರಿನಲ್ಲಿ ಹಿಂದು ಯುವತಿಯರ ಟಾರ್ಗೆಟ್, ಮತಾಂತರ: ಹೇಗಿದೆ ನೋಡಿ ‘ದಿ ಕೇರಳ ಸ್ಟೋರಿ 2’ ಟ್ರೇಲರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ.

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅದಿತಿ ಭಾಟಿಯಾ, ಐಶ್ವರ್ಯಾ ಊಜಾ, ಉಲ್ಕಾ ಗುಪ್ತಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಮುಂದಿನ 25 ವರ್ಷಗಳಲ್ಲಿ ಭಾರತವು ಇಸ್ಲಾಮಿಕ್ ಸ್ಟೇಟ್ ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ಸಂದೇಶದೊಂದಿಗೆ ಆರಂಭಗೊಂಡಿದ್ದು, ಯಾವ ರೀತಿ ಹಿಂದು ಯುವತಿಯರನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಯಾಮಾರಿಸಲಾಗುತ್ತದೆ ಎಂಬ ವಿಚಾರಗಳನ್ನು ತೋರಿಸಲಾಗಿದೆ.

ಈ ಸಿನಿಮಾದಲ್ಲಿ ಕೇರಳ, ಮಧ್ಯಪ್ರದೇಶ, ರಾಜಸ್ತಾನದಲ್ಲಿ ನಡೆಯುವ ಕಥೆಯನ್ನುತೋರಿಸಲಾಗಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟ್ರೇಲರ್ ಮಿಲಿಯನ್​ಗಟ್ಟಲೆ ವೀಕ್ಷಣೆ ಪಡೆದಿದೆ.

2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿತ್ತು.ಅದ್ದೂರಿಯಾಗಿ ಪ್ರದರ್ಶನ ಕಂಡಿತ್ತು. ಇದೀಗ ಸೀಕ್ವೆಲ್ ಆಗಿರುವ ‘ದಿ ಕೇರಳ ಸ್ಟೋರಿ 2’ ಸಿನಿಮಾ ಕೂಡ ‘ಹಲವು ಸತ್ಯ ಘಟನೆಗಳಿಂದ ಸ್ಫೂರ್ತಿ ಪಡೆದು ನಿರ್ಮಾಣವಾದ ಸಿನಿಮಾ’ ಎಂಬುದನ್ನು ಟ್ರೇಲರ್​ನ ಆರಂಭದಲ್ಲೇ ತೋರಿಸಲಾಗಿದೆ.

ಫೆಬ್ರವರಿ 27ರಂದು ಈ ಸಿನಿಮಾ ರಿಲೀಸ್ ಆಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !