June 1, 2026
Monday, June 1, 2026
spot_img

ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮಲ್ಪೆಯಲ್ಲಿ ಮತ್ತೋರ್ವ ಆರೋಪಿ ಪೊಲೀಸ್ ಬಲೆಗೆ

ಹೊಸದಿಗಂತ ವರದಿ,ಉಡುಪಿ: :

ನೌಕಾಪಡೆಯ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ರವಾನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಶ್ಚಿಮ ಬಂಗಾಳ ಮೂಲದ ಆಲಿಫ್ ಇಸ್ಲಾಮ್ (21) ಬಂಧಿತ ಆರೋಪಿ. ಈತ ಪ್ರಸ್ತುತ ಕೇರಳ ರಾಜ್ಯದ ಇಡುಕಿ ಜಿಲ್ಲೆಯ ಮುನಾರ್ ಪ್ರದೇಶದಲ್ಲಿ ವಾಸವಿದ್ದ. ಈತನ ಮೂಲ ಬಾಂಗ್ಲಾದೇಶವೆಂಬ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ ಎಂದು ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆ.21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !