April 15, 2026
Wednesday, April 15, 2026
spot_img

WEATHER | ಚಳಿಯ ಛಾಯೆಯೇ ಇಲ್ಲ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಚಳಿಯ ಛಾಯೆಯೇ ಇಲ್ಲದಂತಾಗಿ ಬಿಸಿಲಿನ ಎಂಟ್ರಿ ಆಗಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಲಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ನೆತ್ತಿ ಸುಡುತ್ತಿದೆ.

ಶಾಖ ಗಾಳಿ ಹಾಗೂ ಆರ್ದ್ರತೆಯ ಹಿನ್ನೆಲೆ ಇಂದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮಾತ್ರ ಚಳಿಯ ವಾತಾವರಣವಿದ್ದು, ನಂತರ ಬಿಸಿಲಿನ ಅನುಭವ ಹೆಚ್ಚಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !