April 17, 2026
Friday, April 17, 2026
spot_img

ನಂದಿನಿ ಪ್ರಾಡಕ್ಟ್ಸ್‌ನಲ್ಲಿ ಯಾವ ಸಮಸ್ಯೆಯೂ ಇಲ್ಲ, ಸುಳ್ಳು ಆರೋಪ ಮಾಡಿದ್ರೆ ಕಠಿಣ ಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಪ್ರಾಡಕ್ಟ್ಸ್‌ಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ನಂದಿನಿ ಉತ್ಪನ್ನಗಳ ಸುರಕ್ಷತೆ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಂದಿನಿ ನಮ್ಮ ಪ್ರಾಡಕ್ಟ್ಸ್‌ ಸೇಫ್‌ ಇದೆ ಎಂದು ಹೇಳಿಕೊಂಡಿದೆ.

ಇಲ್ಲದ ಸಲ್ಲದ ಮಾಹಿತಿ ಹರಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಹಾಲು ಒಕ್ಕೂಟ ಎಚ್ಚರಿಕೆ ಕೊಟ್ಟಿದೆ.

ನಂದಿನಿ ಉತ್ಪನ್ನಗಳು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನಿಗದಿಪಡಿಸಿದ ಎಲ್ಲಾ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದೇವೆ. ನಂದಿನಿ ಹಾಲು ಮತ್ತು ಹಾಲು ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿವೆ.

ಸ್ವಚ್ಛ ಹಾಗೂ ಉತ್ತಮ ಗುಣಮಟ್ಟದ್ದಾಗಿದೆ ನಮ್ಮ ಗ್ರಾಹಕರಿಗೆ ಭರವಸೆ ನೀಡುತ್ತೇವೆ ಎಂದು ಕರ್ನಾಟಕ ಹಾಲು ಒಕ್ಕೂಟ ಮಾಹಿತಿ ನೀಡಿದೆ. ನಂದಿನಿ ಬ್ರಾಂಡ್‌ನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ದುರುದ್ದೇಶಪೂರಿತವಾಗಿ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕೆಎಂಎಫ್ ಎಚ್ಚರಿಕೆ ನೀಡಿದ್ದು, ಆಧಾರರಹಿತ ಆರೋಪ ಮಾಡುವವರ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಸಂಬಂಧಪಟ್ಟ ವಿಭಾಗಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಾಮಂಡಳಿ ಎಚ್ಚರಿಕೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !