February 18, 2026
Wednesday, February 18, 2026
spot_img

ನಾಳೆ ಸಂಜೆ ಬಸ್ ಇರಲ್ಲಾ ಹುಷಾರ್! ಸಾರಿಗೆ ನೌಕರರು vs ಸರ್ಕಾರ: ಯಾರ ಕೈ ಮೇಲು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ರಾಜ್ಯ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ಗೆ ಕರೆ ನೀಡಿದ್ದಾರೆ. ಇದರಿಂದಾಗಿ ನಾಳೆ ಸಂಜೆಯ ನಂತರ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ 4 ನಿಗಮಗಳ ನೌಕರರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಸರ್ಕಾರಕ್ಕೆ ನಾಳೆ ಸಂಜೆ 4 ಗಂಟೆಯವರೆಗೆ ಗಡುವು ನೀಡಲಾಗಿದ್ದು, ಅಷ್ಟರೊಳಗೆ ಅಧಿಕೃತ ತೀರ್ಮಾನ ಹೊರಬರದಿದ್ದರೆ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸುವುದಾಗಿ ನೌಕರರ ಸಂಘ ಎಚ್ಚರಿಸಿದೆ.

ಒಂದೆಡೆ ನೌಕರರು ಮುಷ್ಕರಕ್ಕೆ ಸಜ್ಜಾಗಿದ್ದರೆ, ಇನ್ನೊಂದೆಡೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷಾ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಕೆಲಸಕ್ಕೆ ಹಾಜರಾಗದಿದ್ದರೆ ಆ ದಿನದ ವೇತನ ಕಡಿತಗೊಳಿಸಲಾಗುವುದು. ಪ್ರತಿಭಟನೆಯಲ್ಲಿ ಭಾಗಿಯಾಗುವವರ ವಿರುದ್ಧ ಸೇವಾ ನಿಯಮಗಳ ಅನ್ವಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !