February 18, 2026
Wednesday, February 18, 2026
spot_img

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಏನಂದ್ರು ಚಲುವರಾಯಸ್ವಾಮಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧದ ಒಳಗೆ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಗೊಂದಲದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳ ನಿಯಂತ್ರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಆದೇಶವನ್ನು ಯಾರು ನೀಡಿದ್ದಾರೆ ಅಥವಾ ಯಾವ ಉದ್ದೇಶಕ್ಕೆ ನೀಡಲಾಗಿದೆ ಎಂಬುದು ತಿಳಿದಿಲ್ಲ. ಒಂದು ವೇಳೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಇಂತಹ ಸೂಚನೆ ಹೋಗಿದ್ದರೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯುತ್ತೇನೆ,” ಎಂದು ಸ್ಪಷ್ಟಪಡಿಸಿದರು.

“ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯ. ಅವರಿಗೆ ನಿರ್ಬಂಧ ಹೇರುವುದು ಸರಿಯಲ್ಲ. ಮಾಧ್ಯಮಗಳಿಗೆ ಎಂದಿನಂತೆ ಮುಕ್ತವಾಗಿ ಅವಕಾಶ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು,” ಎಂದು ಅವರು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !