February 18, 2026
Wednesday, February 18, 2026
spot_img

‘ಮಹಾ’ ಸರಕಾರದಿಂದ ಮುಸ್ಲಿಂರಿಗೆ ಶಾಕ್: ‘SEBC’ ಅಡಿ ನೀಡುತ್ತಿದ್ದ 5% ಮೀಸಲಾತಿ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಕ್ಷಣ ಮತ್ತು ಸರಕಾರಿ ಉದ್ಯೋಗಗಳಲ್ಲಿ SEBCಯಡಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರ ಬುಧವಾರ ಅಧಿಕೃತವಾಗಿ ರದ್ದುಗೊಳಿಸಿದೆ.

ಈ ಕುರಿತು ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

2014 ರಲ್ಲಿ ಕಾಂಗ್ರೆಸ್-ಎನ್‌ಸಿಪಿ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇಕಡಾ 5 ರಷ್ಟು ಮೀಸಲಾತಿಯನ್ನು ಘೋಷಿಸಿತು. ಈ ಸಂಬಂಧ ಚುನಾವಣೆಗೆ ಮುಂಚಿತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಆದರೆ 2014 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಈ ಸುಗ್ರೀವಾಜ್ಞೆಯು ರದ್ದಾಗಿತ್ತು. ಇದೀಗ ಮಹಾರಾಷ್ಟ್ರ ಸರ್ಕಾರವು ಎಲ್ಲಾ ಆದೇಶಗಳನ್ನು ರದ್ದುಗೊಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !