February 18, 2026
Wednesday, February 18, 2026
spot_img

ಪ್ರಧಾನಿ ಮೋದಿ ಭೇಟಿಯಾದ ಗೂಗಲ್ ಸಿಇಒ ಸುಂದರ್ ಪಿಚೈ: ಭಾರತದಲ್ಲಿ AI ಬೆಳವಣಿಗೆ ಕುರಿತು ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: :

ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಇಂದು ಗೂಗಲ್ ಸಿಇಒ ಸುಂದರ್ ಪಿಚೈ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ

ಈ ವೇಳೆ ಕೃತಕ ಬುದ್ಧಿಮತ್ತೆಯಲ್ಲಿ ಭಾರತದ ಬೆಳವಣಿಗೆ ಮತ್ತು ಭಾರತೀಯ ವಿದ್ಯಾರ್ಥಿಗಳು ಮತ್ತು ಈ ವಲಯದ ವೃತ್ತಿಪರರೊಂದಿಗೆ ಗೂಗಲ್​ ಹೇಗೆ ಸಹಕರಿಸಬಹುದು ಎಂಬುದರ ಕುರಿತು ಚರ್ಚಿಸಲಾಯಿತು.

ಪ್ರಧಾನಿ ಮೋದಿ X ಪೋಸ್ಟ್​​ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಪಿಚೈ ಅವರನ್ನು ಭೇಟಿಯಾಗುತ್ತಿರುವುದು ಸಂತಸದ ವಿಷಯ. ಭಾರತವು AI ನಲ್ಲಿ ಮಾಡುತ್ತಿರುವ ಕೆಲಸ ಮತ್ತು ಗೂಗಲ್​ ಈ ಕ್ಷೇತ್ರದಲ್ಲಿ ನಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವೃತ್ತಿಪರರೊಂದಿಗೆ ಹೇಗೆ ಕೆಲಸ ಮಾಡಬಹುದು ಎಂಬುದರ ಕುರಿತು ಅವರು ಮಾತನಾಡಿದರು ಎಂದು ಹೇಳಿದ್ದಾರೆ.

ಭಾರತ AI ಇಂಪ್ಯಾಕ್ಟ್ ಶೃಂಗಸಭೆ ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಪಿಚೈ ನವದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಮಯ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ಸಂತಸ ತಂದಿದೆ. ಭಾರತದಲ್ಲಿ AI ಬೆಳವಣಿಗೆ ಹಾಗೂ ಅದನ್ನು ಅಳವಡಿಸಿಕೊಳ್ಳುವ ಬಗ್ಗೆ ಅವರ ದೃಷ್ಟಿಕೋನ ಮತ್ತು ಗೂಗಲ್ ಹೇಗೆ ಸಹಾಯ ಮಾಡುತ್ತಿದೆ ಎಂಬುದರ ಬಗ್ಗೆ ಚರ್ಚಿಸಿದೆವು. ಆರೋಗ್ಯ ಸುಧಾರಣೆ, ಎಲ್ಲಾ ಭಾಷೆಗಳಲ್ಲಿ ಮಾಹಿತಿ ಪ್ರವೇಶ, ಸ್ಟಾರ್ಟಪ್‌ಗಳು, ಕೃಷಿ ಹೀಗೆ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದೆವು ಎಂದು ಅವರು ಎಕ್ಸ್​ ಪೋಸ್ಟ್​ ನಲ್ಲಿ ಬರೆದುಕೊಂಡಿದ್ದಾರೆ.

AI ಇಂಪ್ಯಾಕ್ಟ್ ಶೃಂಗಸಭೆಯು, ಸರ್ವಜನ ಹಿತಾಯ, ಸರ್ವಜನ ಸುಖಾಯ ಎಂಬ ದ್ಯೇಯ ವಾಕ್ಯದೊಂದಿಗೆ ನಡೆಯುತ್ತಿದೆ. ಶೃಂಗಸಭೆಯಲ್ಲಿ 110 ಕ್ಕೂ ಹೆಚ್ಚು ದೇಶಗಳು, 30 ಅಂತಾರಾಷ್ಟ್ರೀಯ ಸಂಸ್ಥೆಗಳು, ಸುಮಾರು 45 ಸಚಿವರು ಸೇರಿದಂತೆ ಹಲವು ಉದ್ಯಮಿಗಳು ಇದರಲ್ಲಿ ಭಾಗವಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !