June 2, 2026
Tuesday, June 2, 2026
spot_img

WEATHER | ರಾಜ್ಯದಲ್ಲಿ ಬಿಸಿಲಿನ ಅಲೆ ಆರಂಭ, ಆದರೆ ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲು ಸುಡುತ್ತಿದೆ. ಆದರೆ ಮಲೆನಾಡಿನಲ್ಲಿ ಎರಡು ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !