February 19, 2026
Thursday, February 19, 2026
spot_img

T20 World Cup: ಭಾರತದ ಮುಂದೆ ಮಂಡಿಯೂರಿದ ನೆದರ್ಲ್ಯಾಂಡ್ಸ್: ಸೂಪರ್ 8ಕ್ಕೆ ಜಬರ್ದಸ್ತ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಲೀಗ್ ಹಂತದ ಪಂದ್ಯದಲ್ಲಿ ಭಾರತ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ 17 ರನ್‌ಗಳ ಅಂತರದಲ್ಲಿ ಗೆಲುವು ದಾಖಲಿಸಿದೆ. ಈ ಫಲಿತಾಂಶದೊಂದಿಗೆ ಭಾರತ ಗುಂಪಿನಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡು ಮುಂದಿನ ಹಂತಕ್ಕೆ ಆತ್ಮವಿಶ್ವಾಸದಿಂದ ಹೆಜ್ಜೆ ಇಟ್ಟಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಶಿವಂ ದುಬೆ ಕೇವಲ 31 ಎಸೆತಗಳಲ್ಲಿ 66 ರನ್ ಸಿಡಿಸಿ ತಂಡದ ಮೊತ್ತ ಹೆಚ್ಚಿಸಿದರು. ಅವರ ದಿಟ್ಟ ಆಟದಲ್ಲಿ ಆರು ಸಿಕ್ಸರ್ ಮತ್ತು ನಾಲ್ಕು ಬೌಂಡರಿಗಳು ಸೇರಿದ್ದವು. ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಇತರ ಆಟಗಾರರು ಸಹ ಪ್ರಮುಖ ರನ್‌ಗಳನ್ನು ಪೇರಿಸಿದರು. ಆದರೆ ಅಭಿಷೇಕ್ ಶರ್ಮಾ ಮತ್ತೆ ಶೂನ್ಯಕ್ಕೆ ಔಟಾದರು.

ಇದನ್ನೂ ಓದಿ:

ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡವು ಹೋರಾಟದ ಪ್ರದರ್ಶನ ನೀಡಿದರೂ 20 ಓವರ್‌ಗಳಲ್ಲಿ 176 ರನ್‌ಗಳಿಗೆ ಸೀಮಿತವಾಯಿತು. ಬಾಸ್ ಡಿ ಲೀಡೆ ಉತ್ತಮ ಇನ್ನಿಂಗ್ಸ್ ಆಡಿದರೂ ಭಾರತೀಯ ಬೌಲರ್‌ಗಳ ನಿಯಂತ್ರಿತ ದಾಳಿ ಎದುರಿಸಲು ಸಾಧ್ಯವಾಗಲಿಲ್ಲ. ವರುಣ್ ಚಕ್ರವರ್ತಿ ಮೂರು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !