October 18, 2026
Sunday, October 18, 2026
spot_img

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ ಸಿಗ್ನಲ್‌: ಹೋರಾಟ ಮಾಡ್ತೀವಿ ಎಂದ ರೈತರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ಮೂರು ತಿಂಗಳಿನಿಂದ ನಾಗರಹೊಳೆ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಫಾರಿ ಬಂದ್‌ ಮಾಡಲಾಗಿತ್ತು. ಹುಲಿಗಳ ದಾಳಿ, ರೈತರ ಆಕ್ರೋಶದ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ನಿನ್ನೆ ಸರ್ಕಾರ ಮತ್ತೆ ಸಫಾರಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

ಇದರಿಂದ ರೈತರ ಆಕ್ರೋಶ ಆಕಾಶಕ್ಕೇರಿದ್ದು, ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.ಮೈಸೂರು, ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಾದ ಬಂಡೀಪುರ ಹಾಗೂ ನಾಗರಹೊಳೆ ವ್ಯಾಪ್ತಿಯಲ್ಲಿ ಮಾನವ ವನ್ಯಪ್ರಾಣಿ ಸಂಘರ್ಷ ಮಿತಿಮೀರಿತ್ತು. ಈ ಹಿನ್ನೆಲೆ ಸಫಾರಿಗೆ ರೈತರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಸಫಾರಿಗಿಂತ ಮನುಷ್ಯನ ಜೀವ ಮುಖ್ಯ ಎಂದು ಹೇಳಿ ಸಫಾರಿಯನ್ನು ಬಂದ್‌ ಮಾಡಲಾಗಿತ್ತು. ಸಫಾರಿ ಬಂದ್‌ ಆದಾಗಿನಿಂದ ವನ್ಯಜೀವಿ-ಮಾನವ ಸಂಘರ್ಷ ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ಸಫಾರಿ ಆರಂಭವಾಗಿದೆ. ಆದರೆ ರೈತ ಸಂಘದ ಮುಖಂಡರು ಆಕ್ರೋಶ ವ್ತಕ್ತಪಡಿಸಿದ್ದು, ಸಫಾರಿ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Must Read