July 18, 2026
Saturday, July 18, 2026
spot_img

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಹೈದರಾಬಾದ್‌ನ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈದಾರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಬಂದಿದ್ದರು, ಕಳೆದ ರಾತ್ರಿ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥತೆ ಉಂಟಾಗಿದೆ. ಕೂಡಲೇ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ವೈದ್ಯರ ಸಲಹೆ ಮೇರೆಗೆ ಅವರನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !