ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ವಲಯ ಘಟಕದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳು ಫೆಬ್ರವರಿ 17 ರಂದು ಬೆಳಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಬ್ರೆಜಿಲ್ ಪ್ರಜೆಯೊಬ್ಬರನ್ನು ಬಂಧಿಸಿದ್ದು, ಆರೋಪಿ ಬಳಿ ಇದ್ದ 23.88 ಕೋಟಿ ರೂ. ಮೌಲ್ಯದ 4.776 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ, ಸಾವೊ ಪಾಲೊದಿಂದ ಕತಾರ್‌ನ ದೋಹಾಗೆ ಪ್ರಯಾಣಿಸಿದ್ದರು ಮತ್ತು ನಂತರ ದೋಹಾದಿಂದ ಬೆಂಗಳೂರಿಗೆ ವಿಮಾನ ಹತ್ತಿದ್ದರು.
ಆರೋಪಿ ಚೆಕ್-ಇನ್ ಮಾಡಿದ ಸಾಮಾನುಗಳನ್ನು ಪರಿಶೀಲಿಸುವಾಗ, ಅಧಿಕಾರಿಗಳು ನಾಲ್ಕು ಮಹಿಳೆಯರ ಕೈಚೀಲಗಳನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರಿನ ಎನ್‌ಸಿಬಿ ಬುಧವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.



