June 27, 2026
Saturday, June 27, 2026
spot_img

ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ರಕ್ಷಿಸಿದ ಕೆಲವೇ ಸೆಕೆಂಡ್‌ನಲ್ಲಿ ಇಡೀ ಕಟ್ಟಡ ಕುಸಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರಿ ಮಳೆಯಿಂದಾಗಿ ಭೀಕರ ಪ್ರವಾಹಕ್ಕೆ ನಲುಗುತ್ತಿರುವ ಪಂಜಾಬ್ ಪ್ರಾಂತ್ಯದಲ್ಲಿ ಜನ ಸಾಮಾನ್ಯರು ಮಾತ್ರವಲ್ಲ ಗಡಿ ಕಾಯುವ ಯೋಧರೂ ಕೂಡ ಪ್ರಾಣಾಪಾಯಕ್ಕೆ ಸಿಲುಕಿದ್ದು, ಪ್ರವಾಹದಲ್ಲಿ ಸಿಲುಕಿದ್ದ 25 ಮಂದಿ ಸಿಆರ್ ಪಿಎಫ್ ಯೋಧರನ್ನು ಭಾರತೀಯ ಸೇನಾಪಡೆಯ ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.

ಬುಧವಾರ ಬೆಳಿಗ್ಗೆ ಪಂಜಾಬ್‌ನ ಪ್ರವಾಹ ಪೀಡಿತ ಗ್ರಾಮದಿಂದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣೆ ಮಾಡಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು. ಅತ್ತ ಸೇನಾ ಹೆಲಿಕಾಪ್ಟರ್ ತೆರಳುತ್ತಲೇ ಇತ್ತ ಯೋಧರು ಆಶ್ರಯ ಪಡೆದಿದ್ದ ಕಟ್ಟಡ ಕೆಲವೇ ಕ್ಷಣಗಳಲ್ಲಿ ಕುಸಿಯಿತು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಸೇನಾ ವಿಮಾನಯಾನವು ತ್ವರಿತ ಮತ್ತು ಧೈರ್ಯಶಾಲಿ ಕಾರ್ಯಾಚರಣೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಲಖನ್‌ಪುರದ ಗಡಿ ಪ್ರದೇಶವಾದ ಮಾಧೋಪುರ ಹೆಡ್‌ವರ್ಕ್ಸ್ ಬಳಿ ಸಿಲುಕಿಕೊಂಡಿದ್ದ 22 ಸೈನಿಕರು ಸೇರಿ 25 ಜನರನ್ನು ಮಂಗಳವಾರದಿಂದ ಸ್ಥಳಾಂತರಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !