April 16, 2026
Thursday, April 16, 2026
spot_img

ಬೇಲ್ ತಂದವನ ಮೇಲೆ ಖಾಕಿ ದರ್ಪ: ಸ್ವಠಾಣೆಯಲ್ಲೇ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಗಡಿ ರಸ್ತೆ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ವಿರುದ್ಧ ಅದೇ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ನ್ಯಾಯಾಲಯದಿಂದ ಮುಂಜಾಗ್ರತಾ ಜಾಮೀನು ತಂದಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಗಂಭೀರ ಆರೋಪ ಇವರ ಮೇಲಿದೆ.

ಸಿವಿಲ್ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಅವಿನಾಶ್ ಎಂಬುವವರು ಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದು, ಅದರ ಪ್ರತಿಯನ್ನು ಸಲ್ಲಿಸಲು ಠಾಣೆಗೆ ಆಗಮಿಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪಿಎಸ್‌ಐ ಕೌಶಿಕ್, “ಬೇಲ್ ತಂದಿದ್ದೀಯಾ?” ಎಂದು ಪ್ರಶ್ನಿಸಿ ಅವಿನಾಶ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಅವರ ಕೆನ್ನೆಗೆ ಬಲವಾಗಿ ಹೊಡೆದ ಪರಿಣಾಮ ಕಿವಿಗೆ ತೀವ್ರ ಪೆಟ್ಟಾಗಿದೆ ಎಂದು ಹೇಳಲಾಗಿದೆ. ಈ ಕುರಿತು ವೈದ್ಯಕೀಯ ವರದಿ ಕೂಡ ಹಲ್ಲೆಯನ್ನು ದೃಢಪಡಿಸಿದೆ.

ಅವಿನಾಶ್ ಅವರು ನೀಡಿದ ಖಾಸಗಿ ದೂರನ್ನು ಪುರಸ್ಕರಿಸಿದ ನ್ಯಾಯಾಲಯವು ತನಿಖೆಗೆ ಆದೇಶಿಸಿತ್ತು. ಅದರಂತೆ ಈಗ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !