April 20, 2026
Monday, April 20, 2026
spot_img

ಪ್ರಯಾಣಿಕರು ನಿರಾಳ: ಸರ್ಕಾರದಿಂದ ಸಿಕ್ಕ ಭರವಸೆಗೆ ಮಣಿದ ಸಾರಿಗೆ ನೌಕರರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರವು ಬೇಡಿಕೆಗಳನ್ನು ಪೂರೈಸುವ ಭರವಸೆ ನೀಡಿದ ಕಾರಣ, ಸಾರಿಗೆ ನೌಕರರು ನಾಳೆ ಹಮ್ಮಿಕೊಂಡಿದ್ದ ಮುಷ್ಕರವನ್ನು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ನಿಗಮಗಳ ಬಸ್‌ ಸಂಚಾರ ನಾಳೆ ಎಂದಿನಂತಿರಲಿದೆ.

ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಸುದೀರ್ಘ ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಿದೆ.

ಸದ್ಯ ವಿದ್ಯಾರ್ಥಿಗಳ ಪರೀಕ್ಷಾ ಸಮಯವಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪ್ರತಿಭಟನೆ ಕೈಬಿಡಲಾಗಿದೆ. ಆದರೆ, ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಮಾರ್ಚ್ 2ರ ವರೆಗೆ ಗಡುವು ನೀಡಲಾಗಿದ್ದು, ಅಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !