July 31, 2026
Friday, July 31, 2026
spot_img

ಜಾಗತಿಕ ಹಸಿವಿನ ವಿರುದ್ಧ ಹೋರಾಟಕ್ಕೆ ಭಾರತದ ಸಾಥ್: 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ ಒಪ್ಪಂದಕ್ಕೆ ಸಹಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾಗತಿಕ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಭಾರತ ಐದು ವರ್ಷಗಳ ಕಾಲ ಅಕ್ಕಿ ಪೂರೈಕೆಗೆ ವಿಶ್ವಸಂಸ್ಥೆ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಜಾಗತಿಕವಾಗಿ ಹಸಿವು ನೀಗಿಸುವ ಗುರಿಯೊಂದಿಗೆ ಭಾರತವು ಮಾನವೀಯತೆಗೆ ಆದ್ಯತೆ ನೀಡಿದ್ದು, ಆಹಾರ ಪೂರೈಕೆಯಲ್ಲಿ ವಿಶ್ವಕ್ಕೇ ಬೆಂಬಲವಾಗಿ ನಿಂತಿದೆ. ಫೆ.18ರಂದು ಭಾರತೀಯ ಆಹಾರ ನಿಗಮ (FCI) ವಿಶ್ವ ಆಹಾರ ಕಾರ್ಯಕ್ರಮ (WFP) ತಿಳುವಳಿಕೆ ಒಪ್ಪಂದಕ್ಕೆ (MoU) ಭಾರತ ಸಹಿ ಹಾಕಿದೆ ಎಂದು ಜೋಶಿ ಮಾಹಿತಿ ನೀಡಿದರು.

ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಮ್ಮುಖದಲ್ಲಿ FCI CMD ರವೀಂದ್ರ ಕುಮಾರ್ ಅಗರ್ವಾಲ್ ಮತ್ತು WFP ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಒಪ್ಪಂದದ ಪ್ರಕಾರ ಭಾರತ FCI 2 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು (25% ವರೆಗೆ ಮುರಿದ) WFPಗೆ ಪೂರೈಸುತ್ತದೆ. ಈ ಒಪ್ಪಂದ 2026ರ ಫೆಬ್ರವರಿ 18ರಿಂದ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ

ಅಕ್ಕಿ ಪೂರೈಕೆ ಒಪ್ಪಂದಕ್ಕೆ ಸಹಿ ಹಾಕುವ ವೇಳೆ ವಿಶ್ವ ಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮದ ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ, ಭಾರತದೊಂದಿಗಿನ ಈ ಒಪ್ಪಂದವು ಜಾಗತಿಕ ಹಸಿವಿನ ವಿರುದ್ಧ ಹೋರಾಡುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !