February 20, 2026
Friday, February 20, 2026
spot_img

WEATHER | ಏನೂ ಸ್ಪೆಷಲ್‌ ಇಲ್ಲ, ರಾಜ್ಯದಲ್ಲಿ ಇಂದು ಕೂಡ ಒಣಹವೆ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವಿದೆ. ಇಂದು ಕೂಡ ಇದೇ ವಾತಾವರಣ ಇರಲಿದೆ. ಚಳಿ ಮಾಯವಾಗಿದ್ದು, ಕಂಬಳಿಗಳೆಲ್ಲ ಕಬೋರ್ಡ್‌ ಸೇರಿವೆ. ಇನ್ನು ಹತ್ತಾರು ದಿನ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !