July 19, 2026
Sunday, July 19, 2026
spot_img

CINE | ದಿ ಕೇರಳ ಸ್ಟೋರಿ 2ಗೆ ಕಾನೂನು ಸಂಕಷ್ಟ: ತಡೆ ಕೋರಿ ಹೈಕೋರ್ಟ್​​ಗೆ ಅರ್ಜಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಚಿತ್ರದಲ್ಲಿ ಕೋಮುವಾದಕ್ಕೆ ಉತ್ತೇಜನ ನೀಡುವ ಅಂಶಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಕೇರಳದಲ್ಲಿ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಕಣ್ಣೂರಿನ ಶ್ರೀದೇವ್ ಎಂಬವರು ಚಿತ್ರದ ವಿರುದ್ಧ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಟ್ರೇಲರ್‌ನಲ್ಲಿ ತೋರಿಸಿರುವ ಕೆಲವು ವಿಷಯಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ನಿರ್ಧಾರವನ್ನೂ ಪ್ರಶ್ನಿಸಲಾಗಿದೆ.

ಇದನ್ನೂ ಓದಿ:

ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲಯವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿಗೊಳಿಸಿದೆ. ಫೆಬ್ರವರಿ 24ರಂದು ಈ ವಿಚಾರಣೆ ನಡೆಯಲಿದ್ದು, ತೀರ್ಪಿನ ಆಧಾರದಲ್ಲಿ ಚಿತ್ರದ ಬಿಡುಗಡೆಗೆ ಅಡ್ಡಿ ಉಂಟಾಗುವ ಸಾಧ್ಯತೆ ಇದೆ. ಆದರೆ ಚಿತ್ರತಂಡ ಫೆಬ್ರವರಿ 27ರಂದು ಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ.

ಕಾಮಾಕ್ಯ ನಾರಾಯಣ್ ಸಿಂಗ್ ನಿರ್ದೇಶನದ ಈ ಚಿತ್ರವನ್ನು ವಿಪುಲ್ ಅಮೃತ್‌ಲಾಲ್ ಶಾ ನಿರ್ಮಿಸಿದ್ದಾರೆ. ಅದಿತಿ ಭಾಟಿಯಾ, ಐಶ್ವರ್ಯಾ ಊಜಾ ಹಾಗೂ ಉಲ್ಕಾ ಗುಪ್ತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 2023ರಲ್ಲಿ ಬಿಡುಗಡೆಯಾದ ‘ದಿ ಕೇರಳ ಸ್ಟೋರಿ’ ಚಿತ್ರದ ಮುಂದುವರಿದ ಭಾಗವಾಗಿ ಈ ಸಿನಿಮಾ ಮೂಡಿಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !