February 20, 2026
Friday, February 20, 2026
spot_img

ಬೆಂಗಳೂರಿನ ಕಸಕ್ಕೆ ಗುಡ್‌ಬೈ ಹೇಳೋ ಟೈಮ್‌? ಡಂಪಿಂಗ್‌ ಯಾರ್ಡ್‌ಗಳಿಗೆ ದೊಡ್ಡ ಮೊತ್ತ ಕೊಟ್ಟ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಅಂತೂ ಪರಿಹಾರ ಸಿಕ್ಕಿದೆ. ಕಸವನ್ನು ಡಂಪ್ ಮಾಡುವ ಡಂಪಿಂಗ್ ಯಾರ್ಡ್‌ಗಳ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ 350 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ನಗರದ ಕಸದ ಸಮಸ್ಯೆ ಪರಿಹಾರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಯಲಹಂಕ, ಬ್ಯಾಟರಾಯನಪುರ, ದೊಡ್ಡಬಳ್ಳಾಪುರ, ಆನೇಕಲ್‌ ಹಾಗೂ ಯಶವಂತಪುರಕ್ಕೆ ಸೇರಿದ ಡಂಪಿಂಗ್‌ ಯಾರ್ಡ್‌ಗಳಿರುವ ವಿಧಾನಸಭಾ ಕ್ಷೇತ್ರಗಳಿಗೆ 350 ಕೋಟಿ ರೂ. ಅನುದಾನ ಬಿಡುಗಡೆಗೆ ಜಿಬಿಎ ಆಯುಕ್ತರು ಭರವಸೆ ನೀಡಿದ್ದರು.

ಇನ್ನು ಮನೆ ಮನೆಗಳಿಂದ ಕಸ ಸಂಗ್ರಹಿಸುವ ಪ್ರಕ್ರಿಯೆಯು ಎಂದಿನಂತೆ ಮುಂದುವರಿದಿದೆ. ಯಾವುದೇ ಅಡಚಣೆ ಆಗಿಲ್ಲ. ವಾಣಿಜ್ಯ ಮಳಿಗೆಗಳಿಂದಲೂ ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !