February 20, 2026
Friday, February 20, 2026
spot_img

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ ಬಳಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಚಿವ ಜಾರಕಿಹೊಳಿ ಸೂಚನೆ

ಹೊಸದಿಗಂತ ವರದಿ ಬೆಳಗಾವಿ :

ತಾಲೂಕಿನ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಗುರುವಾರ ತಂಡ ರಾತ್ರಿ ವೇಳೆ ಯಾರೋ ಕಿಡಗೇಡಿಗಳು ಮಸಿ ಬಳಿದಿರುವುದುರಿಂದ ಸಾಕಷ್ಟು ವಿವಾದಕ್ಕೆ ತಿರುಗುವ ಸಾಧ್ಯತೆ ಇದ್ದು, ಈ ಪ್ರಕರಣಕ್ಕೆ ಸಂಬಂಧಿದ ಅರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈ ಗೊಳ್ಳುವಂತೆ ಸಚಿವ ಸತೀಶ್ ಜಾರಕಿಹೊಳಿ ಪೊಲೀಸರಿಗೆ ಸೂಚಿಸಿದ್ದಾರೆ.

ಮಚ್ಚೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಸಿ ಬಳೆದಿರುವ ಪ್ರಕರಣದ ವಿಚಾರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರೆಸಲಾಗಿದೆ.

ಗ್ರಾಮಸ್ಥರಲ್ಲಿ ಯಾವುದೇ ರೀತಿ ಆತಂಕಕ್ಕೆ ಒಳಗಾಗುವುದು ಬೇಡ, ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು, ಈ ಘಟನೆಯ ಹಿಂದೆ ಯಾವ ಕಿಡೆಗೇಡಿಗಳು ಇದ್ದಾರೋ ಅವರನ್ನು ಕೂಡಲೇ ಪೊಲೀಸರು ಪತ್ತೆ ಹಚ್ಚಿ ಕಾನೂನಿನ ಕ್ರಮ ಕೈಗೋಳ್ಳಲಿದ್ದಾರೆ. ಗ್ರಾಮಸ್ಥರೆಲ್ಲರು ಸಹಕರಿಸಬೇಕೆಂದು ಸತೀಶ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !