April 14, 2026
Tuesday, April 14, 2026
spot_img

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಜೈಲು ಶಿಕ್ಷೆಯೇ? ಸ್ನೇಹಮಯಿ ಕೃಷ್ಣ ಅರೆಸ್ಟ್ ಬೆನ್ನಲ್ಲೇ ರಾಜಕೀಯ ಕಿಚ್ಚು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣದ ವಿರುದ್ಧ ಹೋರಾಡುತ್ತಿದ್ದ ಆರ್‌.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಬಂಧನವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.

ಇದೊಂದು “ದುರಾಡಳಿತದ ಪರಮಾವಧಿ” ಎಂದು ಬಣ್ಣಿಸಿರುವ ಅವರು, ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದೆ ಎಂದು ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, “ಮುಡಾ ಹಗರಣದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ನ್ಯಾಯಕ್ಕಾಗಿ ಹೋರಾಡುವವರ ಕತ್ತು ಹಿಸುಕುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ. ಇದು ಗಾಂಧಿವಾದಕ್ಕೆ ವಿರುದ್ಧವಾದ ನಡೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !