April 16, 2026
Thursday, April 16, 2026
spot_img

ಡೆಡ್‌ಲಾಕ್ ಬೇಡ, ಡೀಟೇಲ್ಸ್ ನೋಡಿ: ಅರಣ್ಯ ಇಲಾಖೆ ಆಕ್ಷೇಪಕ್ಕೆ ಕಾವೇರಿ ನಿಗಮದ ಖಡಕ್ ಉತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕಾಗಿ ಅಗತ್ಯವಿರುವ ಪರಿಸರ ಮತ್ತು ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರದ ಮೇಲೆ ಒತ್ತಡವನ್ನು ಮುಂದುವರಿಸಿದೆ. ಈ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಹೊಸದಾಗಿ ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸಿದೆ.

ಸುಮಾರು 5,200 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಯೋಜನೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಅನುಮತಿ ಕೋರಿ ಜನವರಿ 4 ರಂದು ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿತ್ತು. ಆದರೆ, ಈ ಪ್ರಸ್ತಾವಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸಚಿವಾಲಯವು, “ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆ ಪಡೆದ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಿಲ್ಲ” ಎಂದು ಹೇಳಿ, ದಾಖಲೆಗಳು ಅಪೂರ್ಣವಾಗಿವೆ ಎಂದು ಜನವರಿ 15 ರಂದು ಪ್ರತಿಕ್ರಿಯಿಸಿತ್ತು.

ಕೇಂದ್ರದ ಆಕ್ಷೇಪಕ್ಕೆ ಇದೇ 17 ರಂದು ಖಡಕ್ ಉತ್ತರ ನೀಡಿರುವ ಕಾವೇರಿ ನೀರಾವರಿ ನಿಗಮವು, “ಸಮೀಕ್ಷೆ ಕಾರ್ಯಗಳನ್ನು ನಡೆಸಲು ಅಂತಹ ವಿಸ್ತೃತ ದಾಖಲೆಗಳ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ಅಗತ್ಯವಿರುವ ವನ್ಯಜೀವಿ ಅನುಮೋದನೆ ಪಡೆಯಲು ಮತ್ತೊಂದು ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸುವ ಮೂಲಕ ಯೋಜನೆಗೆ ಇದ್ದ ಅಡೆತಡೆಗಳನ್ನು ನಿವಾರಿಸಲು ಮುಂದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !