July 18, 2026
Saturday, July 18, 2026
spot_img

ನಿಯಂತ್ರಣ ತಪ್ಪಿದ ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಹಾಗೂ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯೇ ಈ ದುರಂತಕ್ಕೆ ಕಾರಣವಾಗಿದೆ.

ಅತಿ ವೇಗವಾಗಿ ಚಲಿಸುತ್ತಿದ್ದ ಲಾರಿಯು ಎದುರಿನಿಂದ ಬರುತ್ತಿದ್ದ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯರ ನೆರವಿನಿಂದ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !