ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈಷ್ಣೋದೇವಿ ಭೂಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ದುಃಖ ವ್ಯಕ್ತಪಡಿಸಿದ್ದಾರೆ.
ಈ ದುರಂತದಿಂದ ಹಾನಿಗೊಳಗಾದವರಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಮೋದಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದಿಂದ ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಹೋಗುವ 12 ಕಿ.ಮೀ. ಹಾದಿಯಲ್ಲಿ ಸುಮಾರು ಅರ್ಧ ದಾರಿಯಲ್ಲೇ ಭೂಕುಸಿತ ಸಂಭವಿಸಿದೆ. ವೈಷ್ಣೋದೇವಿ ಭೂಕುಸಿತದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದ ಸಂಭವಿಸಿದ ಜೀವಹಾನಿ ಬಹಳ ದುಃಖಕರವಾಗಿದೆ. ದುಃಖಿತ ಕುಟುಂಬಗಳೊಂದಿಗೆ ನಾವು ಸದಾ ಇರುತ್ತೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರವು ಎಲ್ಲರಿಗೂ ಸಹಾಯ ಮಾಡುತ್ತಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಪ್ರಾರ್ಥನೆಗಳು ಎಂದಿದ್ದಾರೆ.
ವೈಷ್ಣೋದೇವಿ ಭೂಕುಸಿತದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆ : ಪ್ರಧಾನಿ ಮೋದಿ ಸಂತಾಪ
