July 21, 2026
Tuesday, July 21, 2026
spot_img

ನೀರು, ಬೆಳಕು, ಗಾಳಿಗೆ ಧರ್ಮ ಇದೆಯಾ? ಪ್ರಾರ್ಥನೆ ಯಾರದ್ದೋ ಒಬ್ಬರ ಸ್ವತ್ತಲ್ಲ : ಡಿಕೆಶಿ

ನೀರಿಗೆ, ಬೆಳಕಿಗೆ, ಗಾಳಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಚಾಮುಂಡಿಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ್ ಒಡೆಯರ್ ಹಾಗೂ ವಿಪಕ್ಷಗಳ ಟೀಕೆಗೆ ಉತ್ತರಿಸಿ, ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ, ನಾಡಧ್ವಜ, ನಾಡದೇವಿ ಹಾಗೂ ದೇವರಿಗೆ ಜಾತಿ, ಧರ್ಮ, ಬಣ್ಣ, ರಾಜಕೀಯ ಲೇಪನ ಮಾಡುವ ಅಗತ್ಯವಿಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !